ಕಾಟಿಪಳ್ಳ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ



(ನ್ಯೂಸ್ ಕಡಬ) newskadaba.com ಮಂಗಳೂರು, ಜ.03. ಯುವಕನೋರ್ವನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಘಟನೆ ನಗರದ ಹೊರವಲಯದ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ಬುಧವಾರದಂದು ಹಾಡುಹಗಲೇ ನಡೆದಿದೆ.







ಕೊಲೆಯಾದ ಯುವಕನನ್ನು ಮೊಬೈಲ್ ಕಂಪೆನಿಯೊಂದರಲ್ಲಿ ಎಕ್ಸಿಕ್ಯೂಟಿವ್ ಆಗಿದ್ದ ಸೂರಿಂಜೆ‌ ನಿವಾಸಿ ದೀಪಕ್ ಪೂಜಾರಿ(32) ಎಂದು‌ ಗುರುತಿಸಲಾಗಿದೆ. ದೀಪಕ್ ತನ್ನ ಬೈಕಿನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ದೀಪಕ್ ರನ್ನು ಹತ್ಯೆಗೈಯಲು ಕಾರಣ ಏನೆಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ.






ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

error: Content is protected !!
Scroll to Top