(ನ್ಯೂಸ್ ಕಡಬ) newskadaba.com. ಉಜಿರೆ. ಮಾ 11 ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗವನ್ನು ಬೆಂಗಳೂರಿನ ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆಯು ಕರ್ನಾಟಕದ ಅತ್ಯುತ್ತಮ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಎಂದು ಗುರುತಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವರ್ಣರಂಜಿತ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಜಿರೆಯ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗಡೆ ಅವರಿಗೆ ಪ್ರಶಸ್ತಿಯನ್ನು ನೀಡಲಾಯಿತು. ವಿಭಾಗದ ವಿದ್ಯಾರ್ಥಿಗಳೂ ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.





