➤ ಆಟವಾಡುತ್ತಾ 2ನೇ ಮಹಡಿಯಿಂದ ಬಿದ್ದ ಮಗು ಗಂಭೀರ

(ನ್ಯೂಸ್ ಕಡಬ) newskadaba.com. ಬೆಂಗಳೂರು.ಮಾ 11.  ಬೆಂಗಳೂರಿನ ಕೆಂಗೇರಿ ಬಳಿಯ ಬಿಡಿಎ ಅಪಾರ್ಟ್​ಮೆಂಟ್​ ನ 2ನೇ ಮಹಡಿಯಿಂದ​ ಕೆಳಗೆ ಬಿದ್ದು ಮಗು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.  ರಾಹುಲ್  ಎಂಬ ಪುಟ್ಟ ಮಗು ಅಪಾರ್ಟ್​ಮೆಂಟ್​​ನಿಂದ ಕೆಳಗೆ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸದ್ಯ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಗಾಯಾಳು ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಬೆಳಗ್ಗೆ 11.30ರ ಸುಮಾರಿಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top