➤ಬೆಂಗಳೂರಲ್ಲಿ ಮಹಡಿಯಿಂದ ಜಿಗಿದು ಗಗನಸಖಿ ಆತ್ಮಹತ್ಯೆ

ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ 11. ಗಗನಸಖಿಯೊಬ್ಬರು ಅಪಾರ್ಟ್ ಮೆಂಟ್‍ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ನಡೆದಿದೆ. ಮೂಲತಃ ಹಿಮಾಚಲ ಪ್ರದೇಶದ ಅರ್ಚನಾ(28) ಆತ್ಮಹತ್ಯೆ ಮಾಡಿಕೊಂಡಿರುವ ಗಗನಸಖಿ.

ಕೋರಮಂಗಲದ 8ನೇ ಬ್ಲಾಕ್‍ನಲ್ಲಿರುವ ರೇಣುಕಾ ರೆಸಿಡೆನ್ಸಿ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ಗಗನಸಖಿ ಅರ್ಚನಾ ಅವರು ಸಾಫ್ಟ್ ವೇರ್ ಎಂಜಿನಿಯರ್ ಜೊತೆ ಲೀವಿಂಗ್ ಟುಗೆದರ್‍ ಲ್ಲಿದ್ದರು. ಮಧ್ಯರಾತ್ರಿ 12 ಗಂಟೆ ಸುಮಾರಿನಲ್ಲಿ ಅರ್ಚನಾ ಅವರು ಅಪಾರ್ಟ್ ಮೆಂಟ್‍ನ 4ನೇ ಮಹಡಿಗೆ ಹೋಗಿ ಅಲ್ಲಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

Scroll to Top