➤ಬೀದಿ ನಾಯಿಗಳ ದಾಳಿಗೆ ಸೋದರರು ಬಲಿ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 13. ಬೀದಿ ನಾಯಿಗಳ ದಾಳಿಗೆ  5-7ವರ್ಷದ  ವಯಸ್ಸಿನ ಸೋದರರು ಮೃತಪಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ.  ಮೃತ ಮಕ್ಕಳನ್ನು ಆನಂದ್ ಮತ್ತು ಆತನ ಕಿರಿಯ ಸಹೋದರ ಆದಿತ್ಯ ಎಂದು ಗುರುತಿಸಲಾಗಿದೆ.

ಈ ಇಬ್ಬರೂ ಮಕ್ಕಳು ದೆಹಲಿಯ ವಸಂತ್ ಕುಂಜ್ ನಿವಾಸಿಗಳಾಗಿದ್ದಾರೆ.  ಈ ಮಕ್ಕಳು ಮೂತ್ರ ವಿಸರ್ಜನೆಗೆಂದು  ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಬೀದಿ ನಾಯಿಗಳು ಮಕ್ಕಳನ್ನು ಸುತ್ತುವರಿದು ತೀವ್ರವಾಗಿ ಗಾಯಗೊಳಿಸಿದ್ದವು,ತಕ್ಷಣದಲ್ಲಿ  ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು ಮಕ್ಕಳು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!
Scroll to Top