ಜಂತುಹುಳ ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ ➤ಆರೋಗ್ಯ ಸೇವೆಯ ಸದುಪಯೋಗಕ್ಕೆ ಜಗದೀಶ್ ಶೆಟ್ಟಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಸಾರ್ವಜನಿಕರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಸರ್ಕಾರವು ಆರೋಗ್ಯ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಗಳನ್ನು ತಂದಿದೆ,  ಜಂತುಹುಳ ಬಾಧೆಗೊಳಗಾದ 1 ರಿಂದ 19 ವರ್ಷದೊಳಗಿನವರಿಗೆ ಉಚಿತವಾಗಿ ಜಂತುಹುಳ ನಿವಾರಣಾ ಮಾತ್ರೆಗಳನ್ನು ನೀಡುತ್ತಿದೆ, ಅದರ ಸದುಪಯೋಗ ಪಡೆಯುವಂತೆ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಜಗದೀಶ್ ಶೆಟ್ಟಿ ಕರೆ ನೀಡಿದರು.

ಅವರು ಸೋಮವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರ್.ಸಿ.ಎಚ್ ವಿಭಾಗ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬೊಕ್ಕಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನೇತ್ರಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಆಶಾ ನಾಗರಾಜ್, ಜಂತುಹುಳ ನಿವಾರಣಾ ಮಾತ್ರೆಯಿಂದ ಮಕ್ಕಳ ಆರೋಗ್ಯ ಸುಧಾರಣೆಯಾಗುತ್ತದೆ, ಅವರು ಕಲಿಕೆಯಲ್ಲಿ ಏಕಾಗ್ರತೆಯನ್ನು ಸಾಧಿಸಲು ಸಾಧ್ಯವಾಗುತ್ತದೆ,  ಆರೋಗ್ಯ ಇಲಾಖೆಯು ನೀಡುತ್ತಿರುವ ಸೇವೆಗಳು, ಜನಸಾಮಾನ್ಯರಿಗೆ ಸರಿಯಾದ ಸಮಯದಲ್ಲಿ ಸಿಗುವಂತಾಗಲಿ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ರಾಜೇಶ್ ಬಿ.ವಿ., ಮಂಗಳೂರಿನ ಸಿ.ಆರ್.ಪಿ ಶ್ರೀಮತಿ ಸ್ವೀಟ್ ವೇಗಸ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಸುಜಯ್ ಕುಮ ಹಾಗೂ ಇತರೆ ಗಣ್ಯರು ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಜ್ಯೋತಿ ಕೆ ಉಳೆಪಾಡಿ ಸ್ವಾಗತಿಸಿದರು. ಕಲ್ಪನಾ ನಿರೂಪಿಸಿದರು. ಲಿಲ್ಲಿ ಮೆನೇಜಸ್ ವಂದಿಸಿದರು.

error: Content is protected !!

Join the Group

Join WhatsApp Group