ಪಾಳು ಬಿದ್ದ ಕಟ್ಟಡದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 14. ಕಲ್ಸಂಕ ಜಂಕ್ಷನ್ ಬಳಿ ಇರುವ ಪಾಳು ಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.


ಸುರತ್ಕಲ್ ಮೂಲದ 32 ವರ್ಷದ ವ್ಯಕ್ತಿಯ ಮೃತದೇಹ ಎನ್ನಲಾಗುತ್ತಿದ್ದು, ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವ್ಯಕ್ತಿ ಆಯ ತಪ್ಪಿ ಬಿದ್ದು ಮೃತಪಟ್ಟಿರಬಹುದೇ ಅಥವಾ ಯಾರಾದರೂ ತಳ್ಳಿ ಕೊಲೆ ಮಾಡಿರಬಹುದೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Scroll to Top