➤ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 5,24,426 ಮನೆಗಳ ನಿರ್ಮಾಣ; ಸಚಿವ ವಿ.ಸೋಮಣ್ಣ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ 14.  ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ  5,24,426 ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ಕೊಟ್ಟಿದ್ದೇವೆ ಎಂದು ಬೆಂಗಳೂರಿನಲ್ಲಿ ವಸತಿ ಇಲಾಖೆ ಸಚಿವ ವಿ.ಸೋಮಣ್ಣ ಹೇಳಿದರು.

 

ಮನೆಗಳ ನಿರ್ಮಾಣಕ್ಕೆ ಬರೊಬ್ಬರಿ 8,381 ಕೋಟಿ ಖರ್ಚು ಮಾಡಲಾಗಿದೆ. ಬೊಮ್ಮಾಯಿ ಸಿಎಂ ಆದ ಬಳಿಕ 5 ಸಾವಿರ ಕೋಟಿ ಅನುದಾನ ಕೊಟ್ಟಿದ್ದು, 2 ಲಕ್ಷ ಫಲಾನುಭವಿಗಳನ್ನು ಗುರುತಿಸಿ ಮನೆಗಳನ್ನು ನೀಡಲಾಗಿದೆ. ಮಾರ್ಚ್​ ಒಳಗೆ 7 ಲಕ್ಷ ಫಲಾನುಭವಿಗಳನ್ನ ಗುರುತಿಸುವ ಕೆಲಸ ನಡೆಯುತ್ತಿದೆ ಎಂದರು.

Scroll to Top