ರಾಜ್ಯದ 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಮುಂದಿನ ವರ್ಷದಿಂದ ಮೊಟ್ಟೆ ವಿತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ. 15. ರಾಜ್ಯದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸಲು ನಿರ್ಧರಿಸಿದೆ.


ರಾಜ್ಯದಲ್ಲಿ ಈವರೆಗೆ 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರವೇ ಮೊಟ್ಟೆ ವಿತರಿಸಲಾಗುತ್ತಿದ್ದು, ಈ ಯೋಜನೆ ಯಶಸ್ವಿಯಾದ ಬೆನ್ನಲ್ಲೇ ಇದೀಗ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೂ ವಾರಕ್ಕೆ ಎರಡು ಬಾರಿ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಈಗಾಗಲೇ ಮೊಟ್ಡೆ ನೀಡಲು ಶಿಕ್ಷಣ ಇಲಾಖೆಗೆ 300 ಕೋಟಿ ರೂ. ಅವಶ್ಯತೆ ಇದೆ ಎಂದು ಪ್ರಸ್ತಾವನೆ ಸಲ್ಲಿಸಲಾಗಿದೆ.

error: Content is protected !!

Join the Group

Join WhatsApp Group