ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಮೃತ್ಯು..!

(ನ್ಯೂಸ್ ಕಡಬ)newskadaba.com ವಿಟ್ಲ, ಮಾ. 15. ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ.


ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಅವರು ಮೃತರು. ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ ಅರೇಬಿಯಾಗೆ ತೆರಳಿದ್ದರು. ಆದರೆ ನಿನ್ನೆ ಸೌದಿ ಅರೇಬಿಯಾದ ಬುರೈದದಲ್ಲಿ ಮಗನ ರೂಂನಲ್ಲಿ ಮಲಗಿದ್ದ ಹಸನಬ್ಬ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top