ವಿದ್ಯಾರ್ಥಿಗಳಿಗೆ ಹಾಗೂ ರೈತರಿಗೆ ಗುಡ್ ನ್ಯೂಸ್ ➤ ಈ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ- ಎಸ್ಕಾಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ಬೇಸಿಗೆ ಸಂದರ್ಭದಲ್ಲಿ ವಿದ್ಯುತ್ ಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಅಲ್ಲದೇ ಉತ್ಪಾದನೆಯೂ ಸಹ ಕುಂಠಿತಗೊಳ್ಳುವ ಕಾರಣ ಅಂತಹ ಸಂದರ್ಭದಲ್ಲಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತದೆ. ಆದರೆ ಇದೇ ಸಂದರ್ಭದಲ್ಲಿ ಪರೀಕ್ಷೆಗಳು ನಡೆಯುವ ಕಾರಣ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೊಂದರೆಯಾಗುತ್ತಿತ್ತು. ಅಲ್ಲದೇ ಲೋಡ್ ಶೆಡ್ಡಿಂಗ್ ಕಾರಣದಿಂದ ರೈತರು ಬೆಳೆದ ಬೆಳೆಗಳನ್ನು ರಕ್ಷಿಸಿಕೊಳ್ಳುವ ಸಲುವಾಗಿ ಹೊಲಗದ್ದೆಗಳಿಗೆ ನೀರು ಹಾಯಿಸಲು ಕಷ್ಟವಾಗುತ್ತಿತ್ತು. ಇದೀಗ ಲೋಡ್ ಶೆಡ್ಡಿಂಗ್ ಕುರಿತಂತೆ ಮಹತ್ವದ ತೀರ್ಮಾನವನ್ನು ಕೈಗೊಂಡಿರುವ ರಾಜ್ಯದ ಎಲ್ಲಾ ಎಸ್ಕಾಂ ಗಳು, ವಿದ್ಯಾರ್ಥಿಗಳು ಮತ್ತು ರೈತರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ಮುಂದಿನ ಮೂರು ತಿಂಗಳ ಅವಧಿಗೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ನಿರ್ಧರಿಸಿದೆ.

Also Read  ಕೊನೆಗೂ ಬರುತ್ತಿದೆ ಚಿತ್ರನಟ ಉಪೇಂದ್ರರ ಹೊಸ ರಾಜಕೀಯ ಪಕ್ಷ ► ಪಕ್ಷದ ಹೆಸರು ತಿಳಿಯುವ ಕುತೂಹಲವೇ...?

ಈ ಕುರಿತು ಬೆಂಗಳೂರಿನಲ್ಲಿ ಎಲ್ಲ ಎಸ್ಕಾಂ ಗಳ ವ್ಯವಸ್ಥಾಪಕ ನಿರ್ದೇಶಕರ ಸಭೆ ನಡೆಸಲಾಗಿದ್ದು, ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಆರಂಭಗೊಂಡಿವೆ. ಅಲ್ಲದೇ ರೈತರಿಗೂ ಕೂಡಾ ನಿರಂತರ ವಿದ್ಯುತ್ ಪೂರೈಸುವ ಜವಾಬ್ದಾರಿ ಎಸ್ಕಾಂ ಗಳ ಮೇಲಿದೆ. ಹೀಗಾಗಿ ಮುಂದಿನ ಮೂರು ತಿಂಗಳು ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ತೀರ್ಮಾನ ಕೈಗೊಂಡಿದೆ.

error: Content is protected !!
Scroll to Top