KPTCL ನೌಕರರ ವೇತನ ಶೇ.20ರಷ್ಟು ಹೆಚ್ಚಳ     ➤ ಮುಷ್ಕರ ವಾಪಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.15. ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು.

ನೌಕರರ ಮುಷ್ಕರ ಆರಂಭಕ್ಕೆ ಮುನ್ನ ಇಂದು  ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ (ESCOM) ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇಕಡಾ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದ್ದಾರೆ. ಈ ಹಿನ್ನೆಲೆ ಕೆಪಿಟಿಸಿಎಲ್​ ನೌಕರರು ನಾಳೆಯ ಮುಷ್ಕರನ್ನು ವಾಪಸ್ ಪಡೆದಿದ್ದಾರೆ.

Also Read  ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಅಪಾಯದಿಂದ ಪಾರಾದ ರೋಗಿಗಳು    

 

 

error: Content is protected !!