ವಿಟ್ಲ: ನೇಣುಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 16. ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೈರ ಕರವೀರ ಎಂಬಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡವರನ್ನು ಪದ್ಮಿನಿ (35) ಎಂದು ಗುರುತಿಸಲಾಗಿದೆ. ವಿವಾಹಿತರಾಗಿದ್ದ ಇವರು, ಪತಿಯನ್ನು ತೊರೆದು ತಂದೆ ಮನೆಯಲ್ಲೇ ವಾಸವಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮಾ.15ರಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Scroll to Top