(ನ್ಯೂಸ್ ಕಡಬ) newskadaba.com. ಉಡುಪಿ. ಮಾ 16. ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿದ್ದು, ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿಯನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
ಬೆಳಗ್ಗೆ 11 ರಿಂದ ಮದ್ಯಾಹ್ನ 3 ರವರೆಗೆ ಬಿಸಿಲಿನಲ್ಲಿ ಆಟವಾಡಬಾರದು, ಅಗತ್ಯ ಸಂದರ್ಭದಲ್ಲಿ ಹೊರಗೆ ಹೋಗಲೇಬೇಕಾದಾಗ, ಪಾದರಕ್ಷೆ, ಕೊಡೆ, ಟೊಪ್ಪಿ ಬಳಸುವುದು, ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರನ್ನು ಆಗಾಗ ಕುಡಿಯಬೇಕು, ನಿಯಮಿತವಾಗಿ ಕೈ ತೊಳೆದು ಆಹಾರ ಸೇವಿಸಬೇಕು ಎಂದಿದೆ.
ಇನ್ನು ಅಡುಗೆ ತಯಾರಿ ಸಂದರ್ಭದಲ್ಲಿ ಕಿಟಕಿ ಬಾಗಿಲುಗಳನ್ನು ತೆರೆದಿಡಬೇಕು, ಸೊಪ್ಪು ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚು ಬಳಕೆ ಮಾಡಬೇಕು ಎಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಲಾಖೆಯು ಸುತ್ತೋಲೆ ಬಿಡುಗಡೆ ಮಾಡಿ ಮುಖ್ಯ ಶಿಕ್ಷಕರು, ಪೋಷಕರು, ಅಡುಗೆ ಸಿಬ್ಬಂದಿ ಗಳು, ಹಾಗೂ ಪೋಷಕರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡಲಾಗಿದೆ.