ಪಾಣೆಮಂಗಳೂರು: ಬಸ್-ಸ್ಕೂಟರ್ ಢಿಕ್ಕಿ ► ಸವಾರರಿಬ್ಬರು ಮೃತ್ಯು



(ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಹೀರೋ ಮೆಸ್ಟ್ರೋ ದ್ವಿಚಕ್ರ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿಯುಂಟಾದ ಪರಿಣಾಮ ಸವಾರರಿಬ್ಬರು ಮೃತಪಟ್ಟ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಎಂಬಲ್ಲಿ ಗುರುವಾರದಂದು ನಡೆದಿದೆ.







ಮೃತರನ್ನು ಸಜೀಪ ನಿವಾಸಿಗಳಾದ ಅಝಾದ್(20)
ಮತ್ತು ಮಹಮ್ಮದ್ ಹರ್ಷಿದ್ (18) ಎಂದು ಗುರುತಿಸಲಾಗಿದೆ. ಬಂಟ್ವಾಳ ದಿಂದ ಮೆಲ್ಕಾರ್ ಕಡೆಗೆ ದ್ವಿಚಕ್ರ ವಾಹನದಲ್ಲಿ ಸ್ನೇಹಿತರಿಬ್ಬರು ತೆರಳುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿಯಾಗಿದೆ. ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೆಲ್ಕಾರ್ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌






error: Content is protected !!
Scroll to Top