ರಸ್ತೆ ಅಪಘಾತದಲ್ಲಿ ನಾಲ್ವರು ಸಿಆರ್‌ಪಿಎಫ್ ಯೋಧರಿಗೆ ಗಾಯ ➤ ಆಸ್ಪತ್ರೆಗೆ ದಾಖಲು…!

(ನ್ಯೂಸ್ ಕಡಬ)newskadaba.com ಜಮ್ಮು ಮತ್ತು ಕಾಶ್ಮೀರ, ಮಾ.16. ಉಧಂಪುರ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆಯ ಮಾಹಿತಿ ಪ್ರಕಾರ, ಗಾಯಗೊಂಡ ಸೈನಿಕರು ಸಿಆರ್‌ಪಿಎಫ್ 137 ನೇ ಬೆಟಾಲಿಯನ್‌ನವರು. ಅವರು ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್‌ಟಿ) ವಾಹನದಲ್ಲಿ ಗಸ್ತು ತಿರುಗುತ್ತಿದ್ದಾಗ ಹಿಂದಿನಿಂದ ಟ್ರಕ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಉಧಂಪುರ್‌ನ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಮಂದ್ ಪ್ರದೇಶದಲ್ಲಿ ಹಿಂಬದಿಯಿಂದ ಟ್ರಕ್‌ ಸೇನಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಉಧಂಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಕುಮಾರ್ ಹೇಳಿದ್ದಾರೆ.

 

 

Scroll to Top