ಪುತ್ತೂರು: ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 18. ಅಕ್ರಮ ಮದ್ಯ ಮಾರಾಟ ಮಾಡಿದ ಆರೋಪದಡಿ ಬಂಧಿತರಾಗಿದ್ದ ಸರ್ವೆ ನಿವಾಸಿಗೆ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

 

ಮಾ. 03ರಂದು ಸರ್ವೆ ಗ್ರಾಮದ ನಾರಾಯಣ ಎಂಬವರ ವಿರುದ್ಧ ಕಲo 32, 34, 43 ಕರ್ನಾಟಕ ಅಬಕಾರಿ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಆರೋಪಿ ನಾರಾಯಣ ಅವರು ನಿರೀಕ್ಷಣಾ ಜಾಮೀನು ಕೋರಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.

Also Read  ಇಂದಿನ (ಎ. 03) ಕೊರೋನಾ ಅಪ್ಡೇಟ್ಸ್ ➤ ಕಡಬ ತಾಲೂಕಿನ 6 ಮಂದಿಗೆ ಕೊರೋನಾ ಪಾಸಿಟಿವ್

 

error: Content is protected !!
Scroll to Top