ಮಾ. 20ರಂದು ಸರಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 18. ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮಾರ್ಚ್ 20ರಂದು ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ದಿನದಂದು ನಗರ ವ್ಯಾಪ್ತಿಯ ಮಹಿಳಾ ಸರ್ಕಾರಿ ನೌಕರರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಮಾ.20ರಂದು ಸರ್ಕಾರಿ ನೌಕರರ ಸಂಘದಿಂದ ಬೆಂಗಳೂರಿನ ವಿಧಾನ ಸೌಧದಲ್ಲಿರುವ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಅಧಿಕಾರಿ, ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಾತಿ ಪ್ರಮಾಣಪತ್ರವನ್ನು ಸಲ್ಲಿಸುವ ಷರತ್ತಿಗೆ ಒಳಪಟ್ಟು, ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದಿದ್ದಾರೆ.

Also Read  ಗಡಿನಾಡ ಕನ್ನಡಿಗರಿಗೆ ಶೀಘ್ರ 100 ಕೋಟಿ ಬಿಡುಗಡೆ ➤ ಸಿಎಂ ಬೊಮ್ಮಾಯಿ

error: Content is protected !!
Scroll to Top