ರಾಜ್ಯದಲ್ಲಿ 25ಕ್ಕೂ ಹೆಚ್ಚು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿ ➤ ಶಿವಮೊಗ್ಗದ ಇಬ್ಬರ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 18. ಕರ್ನಾಟಕದಲ್ಲಿ 25ಕ್ಕೂ ಹೆಚ್ಚು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಇಬ್ಬರು ಐಸಿಸ್‌ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳವು ಚಾರ್ಜ್ ಶೀಟ್ ಸಲ್ಲಿಸಿದೆ.

ಶಿವಮೊಗ್ಗದ ಮಾಜ್‌ ಮುನೀರ್‌ ಅಹ್ಮದ್‌ ಹಾಗೂ ಸಯದ್‌ ಯಾಸಿನ್‌ ಎಂಬವರ ವಿರುದ್ಧ ಎನ್‌ಐಎ ಭಾರತೀಯ ದಂಡ ಸಂಹಿತಿಯ ವಿವಿಧ ಸೆಕ್ಷನ್‌ಗಳಡಿ ವಿಶೇಷ ನ್ಯಾಯಾಲಯಕ್ಕೆ ಜಾರ್ಜ್‌ಶೀಟ್‌ ಸಲ್ಲಿಸಿದೆ. ಈ ಕುರಿತು ಎನ್‌ಐಎ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಆರೋಪಿಗಳು ಕರ್ನಾಟಕದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಮೂಲಕ ನಿಷೇಧಿತ ಐಸಿಸ್‌ ಉಗ್ರ ಸಂಘಟನೆಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಈ ಸಂಬಂಧ ಬಂಧಿತ ಇತರೆ ಆರು ಆರೋಪಿಗಳ ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದರು.

Also Read  ಅಂಗನವಾಡಿ ಕೇಂದ್ರಗಳಿಗೆ ಬಿಡುಗಡೆಯಾಗದ ಅನುದಾನ.!➤ಕಾರ್ಯಕರ್ತೆಯರಿಗೆ ಮೊಟ್ಟೆ ಸಾಲದ ಹೊರೆ

error: Content is protected !!
Scroll to Top