ಶಾಲೆಯಲ್ಲಿ ರ‍್ಯಾಗಿಂಗ್ ➤ ಬೇಸತ್ತು ಬಾಲಕಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com.ಮಡಿಕೇರಿ, ಮಾ20.  ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ರ‍್ಯಾಗಿಂಗ್  ನಿಂದ ಬೇಸತ್ತ  7ನೇ ತರಗತಿಯ ವಿದ್ಯಾರ್ಥಿನಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು  ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವರಹಳ್ಳಿ ಗ್ರಾಮದ ಜಿತೇಂದ್ರ-ಅಕ್ಷತಾ ದಂಪತಿಯ ಪುತ್ರಿ ವೈಷ್ಣವಿ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ  7ನೇ ತರಗತಿ ಓದುತ್ತಿದ್ದ ವೈಷ್ಣವಿಗೆ ಕಳೆದ ಒಂದು ವಾರದ ಹಿಂದೆ ರ‍್ಯಾಗಿಂಗ್  ಮಾಡಲಾಗಿತ್ತು, ಇದರಿಂದ  ಖಿನ್ನತೆಗೊಳಗಾಗಿದ್ದ ಆಕೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Scroll to Top