ತುಮಕೂರಿನಲ್ಲಿ ಬೈಕ್ ಅಪಘಾತ ➤ ಸುಳ್ಯದ ಯುವಕ ಮೃತ್ಯು

(ನ್ಯೂ ಸ್ ಕಡಬ) newskadaba.com ಸುಳ್ಯ, ಮಾ. 21. ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕನ್ನು ಪ್ರಜ್ವಲ್ ಕೇರ್ಪಳ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಪಾವಗಡದಲ್ಲಿ ಟೋಲ್ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಟೋಲ್ ಗೇಟ್ ನಿಂದ ಸ್ವಲ್ಪ ದೂರದಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಪ್ರಜ್ವಲ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಸುಬ್ರಹ್ಮಣ್ಯ: RTO ಅಧಿಕಾರಿಗಳ ಕಾರ್ಯಾಚರಣೆ ➤ 20ಕ್ಕೂ ಅಧಿಕ ವೈಟ್ ಬೋರ್ಡ್ ಟ್ಯಾಕ್ಸಿಗಳ ದಾಖಲೆ ವಶಕ್ಕೆ.!

error: Content is protected !!
Scroll to Top