7ನೇ ನೂತನ ವಿ.ವಿ ಗಳಿಗೆ ಕುಲಪತಿಗಳ ನೇಮಕ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.21. ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಇದರಂತೆ ಬೆಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಡಾ.ಬಿ ಕೆ ರವಿ ಅವರನ್ನು ಕೊಪ್ಪಳ ವಿವಿ, ಬಾಗಲಕೋಟೆಯ ತೋಟಗಾರಿಕೆ ವಿ.ವಿ.ದ ಡಾ.ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿವಿ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಡಾ.ಎಂ ಆರ್‍‌ ಗಂಗಾಧರ ಅವರನ್ನು ಚಾಮರಾಜನಗರ ವಿವಿ, ಬೆಳಗಾವಿಯ ಕೆ.ಎಸ್‌.ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್‌ ಶರದ್‌ ದೇಶಪಾಂಡೆ ಅವರನ್ನು ಬಾಗಲಕೋಟೆ ವಿವಿ, ಕುವೆಂಪು ವಿ.ವಿ.ದ ಡಾ.ಬಿ ಎಸ್‌ ಬಿರಾದಾರ್‍‌ ಅವರನ್ನು ಬೀದರ್‍‌ ವಿವಿ, ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ ವಿಭಾಗದ ಡಾ.ಸುರೇಶ್‌ ಎಚ್‌ ಜಂಗಮಶೆಟ್ಟಿ ಅವರನ್ನು ಹಾವೇರಿ ವಿವಿ ಮತ್ತು ಧಾರವಾಡದ ಕರ್ನಾಟಕ ವಿ.ವಿ.ದ ನಿವೃತ್ತ ಪ್ರೊಫೆಸರ್‍‌ ಆಗಿರುವ ಡಾ.ಟಿ ಸಿ ತಾರಾನಾಥ್‌ ಅವರನ್ನು ಹಾಸನ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಿಸಲಾಗಿದೆ ಎಂದು ವರದಿ ತಿಳಿಸಿದೆ.

Also Read  ಇಂದು ಪ್ರಧಾನಿ ಮೋದಿಯಿಂದ ಟೆಲಿಕಾಂ ಸ್ಟ್ಯಾಂಡರ್ಡ್‌ ಸಮ್ಮೇಳನ ಉದ್ಘಾಟನೆ

 

error: Content is protected !!
Scroll to Top