ಕಡಬ: ಮಿನಿವಿಧಾನ ಸೌದ ಸಹಿತ ವಿವಿಧ ಕಟ್ಟಡಗಳ ಉದ್ಘಾಟನೆ ➤ ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಮಹತ್ವದ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 21. ನೂತನ ತಾಲೂಕು ಪಂಚಾಯತ್ ಕಟ್ಟಡ, ಮಿನಿ ವಿಧಾನ ಸೌಧ ಕಟ್ಟಡ, ಕೊಯಿಲ ಪಶು ವೈದ್ಯಕೀಯ ಕಾಲೇಜಿನ ಉದ್ಘಾಟನೆ ಮತ್ತು ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮಗಳು ಮಾ. 24ರಂದು ನಡೆಯಲಿದ್ದು, ಈ ಬಗ್ಗೆ ಕಡಬ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿಯಾಗಿ ಸಚಿವ ಎಸ್.ಅಂಗಾರ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವ ಎಸ್.ಅಂಗಾರ, ಕಡಬ ತಾಲೂಕಿಗೆ ಸಂಬಂಧಪಟ್ಟು ಅತಿ ಅಗತ್ಯವಾಗಿದ್ದ ತಾಲೂಕು ಪಂಚಾಯತ್ ಕಟ್ಟಡ, ಮಿನಿ ವಿಧಾನಸೌಧ ಕಟ್ಟಡ, ಕೊಯಿಲ ಪಶು ವೈದ್ಯಕೀಯ ಕಾಲೇಜು ಇವುಗಳ ಉದ್ಘಾಟನೆ ನಡೆಸಲಾಗುವುದು. ಅಲ್ಲದೇ ಸುಮಾರು 218 ಕೋಟಿ ರೂ. ವೆಚ್ಚದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮವೂ ನಡೆಸಲಾಗುವುದು ಎಂದರು. ವೇದಿಕೆಯಲ್ಲಿ ಕಡಬ ತಹಶೀಲ್ದಾರ್ ರಮೇಶ್ ಬಾಬು, ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ಪಿ.ಆರ್.ಇ.ಡಿ. ಯ ಸಹಾಯಕ ಕಾರ್ಯಪಾಲಕ ಅಭಿಯಂತರ ಭರತ್ ಬಿ, ಕಿರಿಯ ಇಂಜಿನಿಯರ್ ಎಸ್.ಎಸ್.ಹುಕ್ಕೇರಿ, ಕರ್ನಾಟಕ ಗೃಹ ಮಂಡಳಿಯ ಕಿರಿಯ ಇಂಜಿನಿಯರ್ ಪ್ರದೀಪ್, ಉಪ ತಹಶೀಲ್ದಾರ್ ಮನೋಹರ್, ತಾ.ಪಂ. ವ್ಯವಸ್ಥಾಪಕ ಭುವನೇಂದ್ರ ಕುಮಾರ್, ವಿಷಯ ನಿರ್ವಾಹಕಿ ಲಲಿತಾ ಸೇರಿದಂತೆ ವಿವಿಧ ಗ್ರಾ.ಪಂ. ಅಭಿವೃದ್ದಿ ಅಧಿಕಾರಿಗಳು ಉಪಸ್ಥಿತರಿದ್ದರು.

Also Read  ಬಂಟ್ವಾಳ: ಬಿಜೆಪಿ ಮುಖಂಡನ ಮನೆಗೆ ಭಜರಂಗದಳ ಕಾರ್ಯಕರ್ತರಿಂದ ದಾಳಿ

error: Content is protected !!
Scroll to Top