(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಕೊಟ್ಟಾರ ಚೌಕಿಯಲ್ಲಿ ಜನವರಿ 03 ರಂದು ರಾತ್ರಿ ದುಷ್ಕರ್ಮಿಗಳಿಂದ ಬರ್ಬರ ಹಲ್ಲೆಗೀಡಾಗಿ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಆಕಾಶಭವನ ನಿವಾಸಿ ಬಶೀರ್ ಭಾನುವಾರದಂದು ಕೊನೆಯುಸಿರೆಳೆದರು.
ತನ್ನ ಫಾಸ್ಟ್ ಫುಡ್ ಅಂಗಡಿಯನ್ನು ಮುಚ್ಚುವಷ್ಟರಲ್ಲಿ ದುಷ್ಕರ್ಮಿಗಳು ತಲ್ವಾರು ದಾಳಿ ನಡೆಸಿದ ಪರಿಣಾಮ ಬಶೀರ್ ರವರು ಗಂಭೀರ ಗಾಯಗೊಂಡು ಬಿದ್ದಿದ್ದರು. ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಭಾನುವಾರದಂದು ಕೊನೆಯುಸಿರೆಳೆದಿದ್ದಾರೆ.