ನಿತಿನ್ ಗಡ್ಕರಿಗೆ ಮತ್ತೆ ಬೆದರಿಕೆ ಕರೆ ➤10 ಕೋಟಿ ರೂ.ಗಳಿಗೆ ಬೇಡಿಕೆಯಿಟ್ಟ ಅನಾಮಿಕ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಮಾ. 21. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರಿಗೆ ಅನಾಮಿಕ ವ್ಯಕ್ತಿಯಿಂದ ಮತ್ತೊಮ್ಮೆ ಬೆದರಿಕೆ ಕರೆ ಬಂದಿರುವುದಾಗಿ ಮೂಲಗಳು ತಿಳಿಸಿವೆ.

ಅವರು ಮಹಾರಾಷ್ಟ್ರದ ನಾಗ್ಪುರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದು, ನಾಗ್ಪುರದ ಖಾಮ್ಲಾ ಪ್ರಾಂತ್ಯದಲ್ಲಿ ಅವರು ಸಾರ್ವಜನಿಕ ಸಂಪರ್ಕ ಕಚೇರಿಯನ್ನು ಹೊಂದಿದ್ದಾರೆ. ಕಚೇರಿಗೆ ಕರೆ ಮಾಡಿದ ವ್ಯಕ್ತಿಯೋರ್ವ 10 ಕೋಟಿ ರೂ.ಗಳ ಬೇಡಿಕೆಯಿಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ನಾಗ್ಪುರ ಪೊಲೀಸರು ಅನಾಮಧೇಯ ವ್ಯಕ್ತಿಯ ಕರೆಯನ್ನು ಟ್ರೇಸ್ ಮಾಡಲು ಮುಂದಾಗಿದ್ದಾರೆ. ಮಂಗಳವಾರದಂದು ಒಟ್ಟು 2 ಫೋನ್ ಕರೆಗಳು ಬಂದಿರುವ ಹಿನ್ನೆಲೆ, ನಾಗ್ಪುರದಲ್ಲಿರುವ ಗಡ್ಕರಿ ನಿವಾಸ ಹಾಗೂ ಕಚೇರಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ.

Scroll to Top