ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ವೇಗವಾಗಿ‌ ಬಂದ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಮೃತರನ್ನು ಮೈಸೂರಿನ ಪ್ರಕಾಶ್ ಹಾಗೂ ಬನಶಂಕರಿ ಮೂಲದ ನಾಗೇಂದ್ರ ಎಂದು ಗುರುತಿಸಲಾಗಿದೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಅಂಬುಲೆನ್ಸ್ ಢಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಪ್ರಕಾಶ್, ನಾಗೇಂದ್ರ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

 

Scroll to Top