ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆಗೆ ಯತ್ನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 23. ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಇನ್ಸ್ ಪೆಕ್ಟರ್ ವಿವೇಕಾನಂದ ಮತ್ತು ಎಸ್.ಐ.ರಾಮಕೃಷ್ಣ ಅವರ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.


ಬಂಧಿತನನ್ನು ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್ ಯಾನೆ ನಿಸಾರ್ ಆಹಮ್ಮದ್ ಎಂದು ಗುರುತಿಸಲಾಗಿದೆ. ಈತ ಸುಲೈಮಾನ್ ಎಂಬಾತನಿಗೆ ಕತ್ತರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿದ್ದ ಎಂದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Also Read  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ

error: Content is protected !!
Scroll to Top