ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ➤ ನೌಕರರ ಮುಷ್ಕರಕ್ಕೆ ಕರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 23. ಸರ್ಕಾರಿ ನೌಕರರ ವೇತನಕ್ಕೆ ಸರಿಸಮಾನವಾಗಿ ವೇತನ ಏರಿಕೆ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ನಾಳೆಯಿಂದ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.


ಈ ಹಿಂದೆ ಮಾರ್ಚ್ 21ರಂದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ 15% ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದ ಹಿನ್ನೆಲೆ ಮುಷ್ಕರವನ್ನು ಹಿಂಪಡೆದಿದ್ದರು. ಆದರೆ ಸಮಾನ ಮನಸ್ಕರರ ವೇದಿಕೆ, ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ಕೊಟಿದ್ದು, ಸರ್ಕಾರಿ ನೌಕರರಿಗೆ ಸಮಾನವಾಗಿ ವೇತನ ಹೆಚ್ಚಳ ಮಾಡಬೇಕು ಎಂದು ಬೇಡಿಕೆ ಇಟ್ಟಿದೆ.

Also Read  ಸಾಮಾಜಿಕ, ಆರ್ಥಿಕ ವರದಿ ಬಿಡುಗಡೆ ಮಾಡಲಿ: ಬಸವರಾಜ್ ರಾಮರೆಡ್ಡಿ ಒತ್ತಾಯ

error: Content is protected !!
Scroll to Top