ನವಜಾತ ಶಿಶುವನ್ನು 4.5 ಲಕ್ಷಕ್ಕೆ ಮಾರಾಟ ಮಾಡಿದ ತಾಯಿ ➤ 11 ಮಂದಿ ಬಂಧನ

(ನ್ಯೂಸ್ ಕಡಬ)newskadaba.com ಮಾ.24. ಹೆರಿಗೆಯಾದ ತಕ್ಷಣ ಗಂಡು ಶಿಶುವನ್ನು ತಾಯಿಯೇ 4.5 ಲಕ್ಷಕ್ಕೆ ಮಾರಾಟ ಮಾಡಿರುವ ಘಟನೆ ಜಾರ್ಖಂಡ್ನವ ಛತ್ರಾ ಜಿಲ್ಲೆಯಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ನವಜಾತ ಶಿಶುವಿನ ತಾಯಿ ಆಶಾದೇವಿ ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.


ಛತ್ರ ಜಿಲ್ಲೆಯ ಮಕ್ಕಳ ಕಲ್ಯಾಣ ಇಲಾಖೆಯ ಉಪ ಆಯುಕ್ತ ಅಬು ಇಮ್ರಾನ್ ಮಾಹಿತಿ ನೀಡಿದ ಕೂಡಲೇ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು 24 ಗಂಟೆಗಳಲ್ಲಿ ಬೊಕಾರೊ ಜಿಲ್ಲೆಯಿಂದ ನವಜಾತ ಶಿಶುವನ್ನು ರಕ್ಷಿಸಿದ್ದಾರೆ ಎಂದು ಅವಿನಾಶ್ ಕುಮಾರ್ ಮಾಹಿತಿ ನೀಡಿದ್ದಾರೆ.

Also Read  ಮೊದಲು ಹಣ; ಉಳಿದಿದ್ದೆಲ್ಲಾ ನಂತರ..! ➤ ನಾಲ್ವರ ಜಗಳದಿಂದ ಬಯಲಾಯ್ತು ವೇಶ್ಯಾವಾಟಿಕೆ ದಂಧೆ

error: Content is protected !!
Scroll to Top