(ನ್ಯೂಸ್ ಕಡಬ)newskadaba.com ವಿಜಯಪುರ, ಮಾ.24. ವಿಜಯಪುರದ ಹೋಟೆಲ್ ರೂಮ್ ನಲ್ಲಿ ಇಬ್ಬರ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಬಳ್ಳಾರಿ ಮೂಲದ ಸಿ.ಇಂದ್ರಕುಮಾರ ಹಾಗೂ ಮತ್ತೋರ್ವನ ಶವಗಳು ರಕ್ತದ ಮಡುವಿನಲ್ಲಿ ದೊರೆತಿದ್ದು, ಸಾಕಷ್ಟು ಅನುಮಾನ ಮೂಡಿಸಿದೆ ಎಂದು ವರದಿ ತಿಳಿಸಿದೆ.