ಐದನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.25. ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿದ್ದ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲಾ ಸಿಬ್ಬಂದಿಯಿಂದ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ದೆಹಲಿಯಲ್ಲಿ ನಡೆದಿದೆ.


ಆರೋಪಿ ಶಾಲಾ ಸಹಾಯಕ ಅಜಯ್ನಲನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೂ ಆತನ ಮೂವರು ಸಹಚರರ ಬಂಧನಕ್ಕೆ ಬಲೆ ಬೀಸಿದ್ದಾರೆ. ಘಟನೆಯ ನಂತರ ಬಾಲಕಿ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಳು. ಪರೀಕ್ಷೆಗೆ ಸಹ ಹಾಜರಾಗಿರಲಿಲ್ಲ.


ಶಿಕ್ಷಕರು ಆಕೆಯ ಸಹೋದರನನ್ನು ಸಂಪರ್ಕಿಸಿ ಅಂತಿಮ ಪರೀಕ್ಷೆಗೆ ಹಾಜರಾಗದ ಬಗ್ಗೆ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಆಕೆಯ ಸಹೋದರ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿ

 

error: Content is protected !!
Scroll to Top