ಪ್ರಪಾತದಿಂದ ಉರುಳಿ ಮನೆಗೆ ಗುದ್ದಿದ ಕಾರು     ➤  ಅದೃಷ್ಟವಶಾತ್ ಐವರು ಪ್ರಾಣಾಪಾಯದಿಂದ ಪಾರು..!         

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮಾ.25.  ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಗುದ್ದಿದ ಘಟನೆ ಕಳಸ ತಾಲೂಕಿನ ಗಂಗನಕುಡಿಕೆ ಗ್ರಾಮದಲ್ಲಿ ನಡೆದಿದೆ.

ಕಾರು ಪ್ರಪಾತದಿಂದ ಉರುಳಿ ಮನೆಯ ಗೋಡೆಗೆ ಗುದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ.

ಪ್ರವಾಸಿಗರು ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ.

 

Scroll to Top