ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟ ದಿ.ಸುಷ್ಮಾ ಸ್ವರಾಜ್ ಪುತ್ರಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.27. ಭಾರತೀಯ ಜನತಾ ಪಕ್ಷದ (ಬಿಜೆಪಿ) ಫೈರ್ ಬ್ರ್ಯಾಂಡ್ ನಾಯಕಿ ಎಂದೇ ಖ್ಯಾತಿ ಗಳಿಸಿದ್ದ ದಿ.ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ ಈಗ ಸಕ್ರಿಯ ರಾಜಕಾರಣಕ್ಕೆ ಕಾಲಿರಿಸಿದ್ದಾರೆ. ಅವರು ದೆಹಲಿಯ ಬಿಜೆಪಿ ಕಾನೂನು ಘಟಕದ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ ಎನ್ನಲಾಗಿದೆ.

ಬಾನ್ಸುರಿ ಸ್ವರಾಜ್​ ವಕೀಲೆಯಾಗಿದ್ದು, ಅವರು ಸುಪ್ರೀಂಕೋರ್ಟ್​​ನಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಅವರನ್ನು ಬಿಜೆಪಿಯ ದೆಹಲಿ ಅಧ್ಯಕ್ಷ ವೀರೇಂದ್ರ ಸಚ್​ದೇವಾ ಅವರು ಕಾನೂನು ಘಟಕದ ಸಹ ಸಂಚಾಲಕಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Scroll to Top