ಕಾರು, ಬೈಕ್ ಮತ್ತು ಬಸ್ ನಡುವೆ ಸರಣಿ ಅಪಘಾತ ➤ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.27. ಕುಂಭಾಶಿಯಿಂದ ಕುಂದಾಪುರ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕನಿಗೆ ಕುಂಭಾಶಿ ಪಾಕಶಾಲಾ ಸಮೀಪದ ಕಡೆಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಕುಂಭಾಶಿಯಲ್ಲಿ ನಡೆದಿದೆ.

ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಳೆಕಟ್ಟು ನಿವಾಸಿ ಪ್ರಶಾಂತ್ ಹಾಗೂ ಅವರ ಸ್ನೇಹಿತ ವಿಘ್ನೇಶ್ ಕೆಲಸದನಿಮಿತ್ತ ಕುಂದಾಪುರ ಕಡೆಗೆ ಹೋಗುವಾಗ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲನೆ ಮಾಡುತ್ತಿದ್ದ ಯುವಕ ಪ್ರಶಾಂತ್ ಪೂಜಾರಿ (25) ತೀವ್ರ ಸ್ವರೂಪದ ಗಾಯಗಳಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ರಾತ್ರಿ ಮೃತಪಟ್ಟಿದ್ದಾರೆ.

Scroll to Top