ಮಂಗಳೂರು: ಕಾರ್ಯಕ್ರಮವೊಂದಕ್ಕೆ ನುಗ್ಗಿ ದಾಂಧಲೆ ಪ್ರಕರಣ ➤ ಆರು ಮಂದಿ ಭಜರಂಗದಳದ ಕಾರ್ಯಕರ್ತರ ಬಂಧನ..!

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ನಗರದ ಮರೋಳಿಯಲ್ಲಿ ನಡೆದ ಹೋಳಿ ಕೂಟಕ್ಕೆ ಅಡ್ಡಿಪಡಿಸಲು ಯತ್ನಿಸಿದ ಆರೋಪದ ಮೇಲೆ ಬಜರಂಗದಳದ ಆರು ಕಾರ್ಯಕರ್ತರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಗಣೇಶ್ ಅತ್ತಾವರ, ಜೈ ಪ್ರಶಾಂತ್, ಬಾಲಚಂದ್ರ, ಅಕ್ಷಯ್, ಚಿರಾಗ್, ಮಿಥುನ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Scroll to Top