ಪೂರ್ವ ಮುಂಗಾರು ಆರಂಭ ➤ ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.27. ಈಗಾಗಲೇ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಆರಂಭವಾಗಿದ್ದು,ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

Scroll to Top