ಕಾಲುಜಾರಿ ಬಿದ್ದು ಎನ್‍ಸಿಸಿ ಅಧಿಕಾರಿ ಮೃತ್ಯು..!

(ನ್ಯೂಸ್ ಕಡಬ)Newskadaba.com ಮಡಿಕೇರಿ: ಮಾ,27  ಕಾಲುಜಾರಿ ಬಿದ್ದು ಎನ್‍ಸಿಸಿ ಅಧಿಕಾರಿ ಮೃತ್ಯು. ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ವಿರಾಜಪೇಟೆ ತಾಲ್ಲೂಕಿನ ಕಡಂಗದ ಮರೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಎನ್‍ಸಿಸಿ ಅಧಿಕಾರಿಯಾಗಿದ್ದ ಡಾ.ಬಲ್ಯಂಡ ಬೀನಾ (52) ಎಂದು ಗುರುತಿಸಲಾಗಿದೆ.

ಬಿದ್ದ ಪರಿಣಾಮ ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ  ಸಾವನ್ನಪ್ಪಿದ್ದಾರೆ.

Scroll to Top