ಮಂಗಳೂರು: ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ತಗುಲಿದ ಬೆಂಕಿ..! ➤ ಲಕ್ಷಾಂತರ ಮೌಲ್ಯದ ಸೊತ್ತು ಬೆಂಕಿಗಾಹುತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.28. ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಬಳಿ ನಡೆದಿದೆ.

ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿಗೆ ಐಸ್ ಕ್ರೀಮ್ ದಾಸ್ತಾನು ಕೊಠಡಿಗೆ ಆರಂಭದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಅದು ಸನಿಹದಲ್ಲಿದ್ದ ವಾಹನಕ್ಕೂ ತಗುಲಿ ವಾಹನ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋಗಿದೆ ಎನ್ನಲಾಗಿದೆ. ಇನ್ನು ಮಾಹಿತಿ ಪಡೆದ ಪಾಂಡೇಶ್ವರ ಹಾಗೂ ಕದ್ರಿ ಅಗ್ನಿ ಶಾಮಕ ದಳದ  ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.

 

 

Scroll to Top