ನಮೀಬಿಯಾದಿಂದ ತರಲಾಗಿದ್ದ ಹೆಣ್ಣು ಚೀತಾ ‘ಸಾಶಾ’ ಮೃತ್ಯು

(ನ್ಯೂಸ್ ಕಡಬ)newskadaba.com ಭೋಪಾಲ್‌, ಮಾ.28. ಕಳೆದ ವರ್ಷ ನಮೀಬಿಯಾದಿಂದ ತರಲಾದ 8 ಚೀತಾಗಳ ಪೈಕಿ ಒಂದು ಹೆಣ್ಣು ಚೀತಾ ಮೃತಪಟ್ಟಿದೆ. ಮೃತ ಚೀತಾ ‘ಸಾಶಾ’ ಕಳೆದ ಜನವರಿಯಿಂದಲೂ ಮೂತ್ರಪಿಂಡಕ್ಕೆ ಸಂಬಂಧಿತ ಸೋಂಕಿನಿಂದ ಬಳಲುತ್ತಿತ್ತು.


ಅಂದಿನಿಂದಲೂ ಚೀತಾವನ್ನು ತೀವ್ರ ವೈದ್ಯಕೀಯ ನಿಗಾದಲ್ಲಿ ಇಡಲಾಗಿತ್ತು. ಉಳಿದ ಚೀತಾಗಳು ಆರೋಗ್ಯವಾಗಿವೆ ಎಂದು ಕುನೊ ರಾಷ್ಟ್ರೀಯ ಅಭಯಾರಣ್ಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!