ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ..! ➤ ಮುಖ್ಯೋಪಾಧ್ಯಾಯ ಅಮಾನತು

(ನ್ಯೂಸ್ ಕಡಬ)newskadaba.com  ತುಮಕೂರು, ಮಾ.28. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ಮಂಗಳವಾರ ತುಮಕೂರು ಜಿಲ್ಲೆಯ ಶಾಲೆಯೊಂದರ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ.

ಮೂಲಗಳ ಪ್ರಕಾರ, ಬೋರಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಮಂಜುನಾಥ, ವಿದ್ಯಾರ್ಥಿನಿಯರೊಂದಿಗೆ ಪ್ರತಿದಿನ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವೇಳೆ ಕರ್ತವ್ಯಲೋಪ ಆರೋಪದಡಿ ಮುಖ್ಯ ಶಿಕ್ಷಕ ನಟರಾಜ್ ಅವರನ್ನು ಅಮಾನತುಗೊಳಿಸಲಾಗಿದೆ.

 

Scroll to Top