ಕರ್ನಾಟಕ ವಿಧಾನಸಭೆ ಚುನಾವಣೆ; ಇಂದೇ ದಿನಾಂಕ ಘೋಷಣೆ

(ನ್ಯೂಸ್ ಕಡಬ)newskadaba.com ದೆಹಲಿ, ಮಾ.29. ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದೇ ದಿನಾಂಕ ಘೋಷಣೆಯಾಗಲಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಣೆ ಮಾಡಲಿದೆ. ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ ಎಂದು ವರದಿ ತಿಳಿಸಿದೆ.

ಒಂದು ವೇಳೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದರೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

 

Scroll to Top