ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ➤ ಮೇ 13ಕ್ಕೆ ಫಲಿತಾಂಶ !!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಯಾವಾಗ ಎನ್ನುವ ಪ್ರಶ್ನೆಗೆ ಇಂದು ತೆರೆ ಬಿದ್ದಿದೆ. ರಾಜ್ಯದ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಲಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್  ಸುದ್ದಿಗೋಷ್ಠಿ ನಡೆಸಿ ಚುನಾವಣೆ ಕುರಿತು ಮಾಹಿತಿ ನೀಡಿದರು.

ರಾಜ್ಯದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಏಕ ಹಂತದಲ್ಲಿ ಮೇ 10 2023 ರಂದು ಬುಧವಾರ ಮತದಾನ ನಡೆಯಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದೊಂದಿಗೆ ಮೇ 13 ರಂದು ಮತ ಎಣಿಕೆ ನಡೆಯಲಿದೆ.

 

Scroll to Top