ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ !    ➤ ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29. ಕೇಂದ್ರ ಚುನಾವಣಾ ಆಯೋಗವು ದೆಹಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಇಂದೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದ್ದು, ಸಿಎಂ ಬೊಮ್ಮಾಯಿ ಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.

ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ.

 

Scroll to Top