ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಗುಡ್ ನ್ಯೂಸ್       ➤ ಅಕ್ರಮ ಸಕ್ರಮ ಯೋಜನೆಯಡಿ ಸಾಗುವಳಿ ಚೀಟಿ ವಿತರಣೆ 

(ನ್ಯೂಸ್ ಕಡಬ)Newskadaba.com ಡಿಕೇರಿ: ಮಾ.29   ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಸಾಗುವಳಿ ಚೀಟಿ ವಿತರಿಸಲಾಗುತ್ತಿದೆ. ಇದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಲಿದೆ. ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಮೇ, 31 ರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಇದ್ದು, ಈ ಅವಕಾಶವನ್ನು ಅರ್ಹರು ಸುದುಪಯೋಗ ಮಾಡಿಕೊಳ್ಳುವಂತೆ ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.

ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 57 ಮಂದಿಗೆ ‘ಸಾಗುವಳಿ ಚೀಟಿ’ ವಿತರಿಸಿದರು. ಮಡಿಕೇರಿ ತಾಲ್ಲೂಕಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 705 ಅರ್ಜಿಗಳಲ್ಲಿ 545 ಮಂದಿಗೆ ಸಾಗುವಳಿ ಚೀಟಿ ವಿತರಿಸಲಾಗಿದೆ. ಇನ್ನೂ ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಮೇ 31 ರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಇದ್ದು, ಈ ಅವಕಾಶವನ್ನು ಅರ್ಹರು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

Also Read  ಕೇರಳ: ದೇವಾಲಯದ 10 ಅರ್ಚಕರಿಗೆ ಕೋವಿಡ್ ದೃಢ

 

 

 

 

 

 

 

 

error: Content is protected !!
Scroll to Top