`SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್                       ➤ ಈ ಬಾರಿಯೂ ಸಿಗಲಿದೆ ಶೇ.10 ರಷ್ಟು ಗ್ರೇಸ್ ಮಾರ್ಕ್ಸ್..!!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮಾ.30 2022-23ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ. 10 ರಷ್ಟು ಗ್ರೇಸ್ ಅಂಕ ನೀಡುವುದಾಗಿ ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಎಸ್‌ಎಸ್ ಎಲ್ ಸಿ ಬೊರ್ಡ್ ನಿರ್ದೇಶಕ ರಾಮಚಂದ್ರ, ಈ ಬಾರಿಯೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ.10 ರಷ್ಟು ಗ್ರೇಸ್ ಅಂಕ ನೀಡಲಾಗುವುದು. ಮೂರು ವಿಷಯಗಳಿಗೆ ಮಾತ್ರ ಗ್ರೇಸ್ ಮಾರ್ಕ್ ಅಂಕ ನೀಡಲಾಗುತ್ತದೆ. ತೇರ್ಗಡೆ ಕಡಿಮೆ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

Also Read  ಮಂಗಳೂರು ಮಹಾನಗರ ಪಾಲಿಕೆ, ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರಿಗೆ ರೇಷನಿಂಗ್ ಪದ್ಧತಿ ಜಾರಿ➤ನೀರು ಮಿತವಾಗಿ ಬಳಸಿ

 

 

 

 

 

 

 

error: Content is protected !!
Scroll to Top