ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಢಿಕ್ಕಿ ➤ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ನಗರದ ಬೆಂದೂರ್ ವೆಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.


ಮೃತರನ್ನು ಐರಿನ್ ಡಿಸೋಜ(55) ಎಂದು ಗುರುತಿಸಲಾಗಿದೆ. ಸಿಟಿ ಬಸ್ ಬೆಂದೂರ್ ವೆಲ್ ಜಂಕ್ಷನ್ ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದು, ಈ ವೇಳೆ ಅದೇ ಬಸ್ಸಿನಿಂದ ಇಳಿದು ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

Scroll to Top