ಡೆತ್ ನೋಟ್ ಬರೆದಿಟ್ಟು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ



(ನ್ಯೂಸ್ ಕಡಬ) newskadaba.com ಮಂಗಳೂರು, ಜ.09. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆಯಲ್ಲಿ ಸೋಮವಾರದಂದು ನಡೆದಿದೆ.







ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿ ಹಾಸನ ಮೂಲದ ತೇಜಸ್(17) ಎಂದು ಗುರುತಿಸಲಾಗಿದೆ. ಈತ ತನ್ನ ಪೋಷಕರ ಹಾಗೂ ಗೆಳೆಯರ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ‌ ಡೆತ್ ನೋಟ್ ಬರೆದಿಟ್ಟು ಸೋಮವಾರ ರಾತ್ರಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಡೆತ್ ನೋಟನ್ನು ವಶಪಡಿಸಿಕೊಂಡಿರುವ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top