ಮೋದಿ ವಿರುದ್ದ ಪೋಸ್ಟರ್ !!! ➤ 8 ಮಂದಿ ಬಂಧನ



(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.31. ಮೋದಿ ಹಟಾವೋ, ದೇಶ್ ಬಚಾವೋ ಎಂಬುದಾಗಿ ಅಹ್ಮದಾಬಾದ್‌ನ ವಿವಿಧೆಡೆ ಪೋಸ್ಟರ್ ಹಾಕಿದ ವಿಚಾರವಾಗಿ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.







ಪ್ರಧಾನಿ ನರೇಂದ್ರ ಮೋದಿ ವಿರುದ್ದ ಆಮ್ ಆದ್ಮಿ ಪಕ್ಷವು ರಾಷ್ಟ್ರ ವ್ಯಾಪಿ ಅಭಿಯಾನ ಆರಂಭಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದ್ದು, ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ.






ಸದ್ಯ ಎಂಟು ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಹ್ಮದಾಬಾದ್ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

 

 

error: Content is protected !!
Scroll to Top