(ನ್ಯೂಸ್ ಕಡಬ) newskadaba.com. ಚಿಕ್ಕಮಗಳೂರು, ಮಾ.31. ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯವು ಇವರ ಬಂಧನಕ್ಕೆ ಜಾಮೀನುರಹಿತ ವಾರಂಟ್ ಹೊರಡಿಸಿದೆ.
ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಎಂ.ಪಿ.ಕುಮಾರಸ್ವಾಮಿ ಅವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿತ್ತಾದರೂ ಕುಮಾರಸ್ವಾಮಿ ಅರ್ಜಿ ಸಲ್ಲಿಸಿರಲಿಲ್ಲ. ಇದೀಗ ಮಾ.28 ರಂದು ಕೋರ್ಟ್ ಜಾಮೀನುರಹಿತ ವಾರಂಟ್ ಹೊರಡಿಸಿದೆ. ಕುಮಾರಸ್ವಾಮಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಚಿಕ್ಕಮಗಳೂರು ಎಸ್ ಪಿಗೆ ಸೂಚನೆ ನೀಡಲಾಗಿದೆ.