`LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 91.50 ರೂ.ಇಳಿಕೆ     



(ನ್ಯೂಸ್ ಕಡಬ)newskadaba.com ನವದೆಹಲಿ, ಏ.01. ಕೇಂದ್ರ ಸರ್ಕಾರವು ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗೆ ಇಳಿಕೆಯಾಗಿದ್ದು, ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 2,028 ರೂ. ಇದೆ ಎನ್ನಲಾಗಿದೆ.







ದರಗಳ ಕಡಿತವು ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ ಮಾತ್ರ ಎಂದು ತಿಳಿದುಬಂದಿದೆ. ದೇಶೀಯ LPG ಅನಿಲ ಗ್ರಾಹಕರಿಗೆ ಬೆಲೆಯಲ್ಲಿ ಯಾವುದೇ ಪರಿಷ್ಕರಣೆಯಾಗಿಲ್ಲ ಎನ್ನಲಾಗಿದೆ. 14.2 ಕೆಜಿ ಗ್ಯಾಸ್ ಸಿಲಿಂಡರ್ ಗಳ ದರಗಳು ಕಳೆದ ತಿಂಗಳಂತೆಯೇ ಉಳಿದಿವೆ. ಕಳೆದ ತಿಂಗಳು ಕೇಂದ್ರವು ದೇಶೀಯ ಅಡುಗೆ ಅನಿಲದ ಬೆಲೆಯನ್ನು 50 ರೂ.ಗೆ ಹೆಚ್ಚಿಸಿತ್ತು ಎಂದು ತಿಳಿದುಬಂದಿದೆ.






 

error: Content is protected !!
Scroll to Top